ಬೆಂಗಳೂರು : ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಒಬ್ಬರ ಮುಖ ಇನ್ನೊಬ್ಬರು ನೋಡಿದರೆ ಕಿಡಿಕಾರುತ್ತಾರೆ. ಅಂತಹದರಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಚಿವರೊಬ್ಬರನ್ನು ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ. ಹೌದು. ಇಂದು ವಿಧಾನಸಭೆಯ ಕಲಾಪದಲ್ಲಿ ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಕಾಂಗ್ರೆಸ್ನ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಡೈನಾಮಿಕ್ ಎಂದು ಹೊಗಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಡಿಕೆ ಶಿವಕುಮಾರ್ ರಂತಹ ಡೈನಾಮಿಕ್