ಮೈಸೂರು ಜಿಲ್ಲೆಯ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಶಾಸಕರು ಗಾಯಗೊಂಡಿದ್ದಾರೆ.ಶಾಸಕ ರಾಮದಾಸ್ ರಿದ್ದ ಕಾರು ಢಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರಿನಲ್ಲಿ ನಡೆದಿದೆ. ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರಿಗೆ ಗಾಯಗಳಾಗಿವೆ. ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಇದೇ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ತಲುಪಿದಾಗ ಕಾರು ಚಾಲಕನಿಗೆ ನಿದ್ರೆ ಆವರಿಸಿದೆ. ಇದರಿಂದಾಗಿ