ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ತರಕಾರಿ, ಹೂ, ಹಣ್ಣು ಮಾರಾಟ ಮಾಡಲು ಬಿಜೆಪಿ ಶಾಸಕರೊಬ್ಬರು ವ್ಯವಸ್ಥೆ ಕಲ್ಪಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ವರ್ತಕರು ಹಾಗೂ ಗ್ರಾಹಕರ ಆರೋಗ್ಯ ದೃಷ್ಟಿಯಿಂದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ತರಕಾರಿ, ಹೂ ಮತ್ತು ಹಣ್ಣಿನ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಾಸನ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದ್ದಾರೆ.ಕಟ್ಟಿನಕೆರೆ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ. ಮಾರುಕಟ್ಟೆಗೆ ಶಾಸಕ ಪ್ರೀತಂ ಜೆ. ಗೌಡ