ಬಿಜೆಪಿ ಶಾಸಕ ಸುರೇಶಕುಮಾರ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೆಲ ಕಾರ್ಯಕರ್ತರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸುರೇಶಕುಮಾರ ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಬೇಕು ಎಂದು ಇ-ಮೇಲ್ ಮೂಲಕ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ರಾಜಾಜಿನಗರ ಕ್ಷೇತ್ರದ ಶಾಸಕರಾಗಿರುವ ಸುರೇಶಕುಮಾರ್ ಅವರ ವಿರುದ್ಧ ಸ್ಥಳೀಯರು ತಿರುಗಿ ಬಿದ್ದಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು,