ಬೆಳಗಾವಿ : ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿದರೂ ಬೆಳಗಾವಿ ಜಿಲ್ಲೆಯ ರಾಯಬಾಗದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರು 63ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಜನ್ಮದಿನದ ನಿಮಿತ್ತ ಶಾಸಕರು ಹಾಗೂ ಧರ್ಮ ಪತ್ನಿ ಅವರನ್ನು ರಾಯಬಾಗ ಪಟ್ಟಣದಲ್ಲಿ ಮೆರವಣಿಗೆ ಮಾಡಿ, ಬಳಿಕ ವೇದಿಕೆಗೆ ಕರೆತರಲಾಗಿತ್ತು. ಈ ಕಾರ್ಯಕ್ರಮಕ್ಕೆ ಅನೇಕರಿಗೆ ಆಮಂತ್ರಣ ನೀಡಿದ್ದರಿಂದ ಸಾವಿರಾರು ಜನರು ಶಾಸಕರ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.