ದಾವಣಗೆರೆ : ಯೋಗಕ್ಕಿಂತ ಕೂಲಿ ಮಾಡೋದು ಆರೋಗ್ಯಕ್ಕೆ ಉತ್ತಮ ಎಂದು ಪ್ರಧಾನಿ ಮೋದಿಗೆ ಟಾಂಗ್ ಕೊಡುವುದರ ಮೂಲಕ ಬಿಜೆಪಿ ಶಾಸಕ ರೇಣುಕಾಚಾರ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ಕೆರೆ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಿದ್ದ ಶಾಸಕ ರೇಣುಕಾಚಾರ್ಯ ಅವರು ಉದ್ಯೋಗ ಖಾತರಿ ಯೋಜನೆಯಡಿ 1 ಗಂಟೆ ದುಡಿದ್ದಾರೆ. ಕೂಲಿಯಾಳುಗಳೊಂದಿಗೆ ಕೆರೆ ಹೂಳೆತ್ತುವ ಕೆಲಸ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಯೋಗಕ್ಕಿಂತ ಕೂಲಿ ಮಾಡೋದು