ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಶಾಸಕರು ಅಸಮಾಧಾನ; ಈ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು| pavithra| Last Modified ಗುರುವಾರ, 14 ಜನವರಿ 2021 (10:39 IST)
ಬೆಂಗಳೂರು : ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.

ಈ ವಿಚಾರದಿಂದ ಕೋಪಗೊಂಡ ಸಿಎಂ ಬಿಎಸ್ ಯಡಿಯೂರಪ್ಪ, ಈ ಬಗ್ಗೆ ಶಾಸಕರಿಗೆ ವಿರೋಧವಿದ್ದರೆ ದೆಹಲಿಗೆ ಹೋಗಿ ನಾಯಕರಿಗೆ ದೂರು ನೀಡಿ.ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ. ಬೇಕಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಏನೇ ಇದ್ದರೂ ಬಿಜೆಪಿ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.   ಇದರಲ್ಲಿ ಇನ್ನಷ್ಟು ಓದಿ :