ಬೆಂಗಳೂರು : ಬಿಜೆಪಿಯಿಂದ ಯಾರೇ ಶಾಸಕರು ಕಾಂಗ್ರೆಸ್ಗೆ ಬಂದರೂ ನಾವು ವಿರೋಧ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪರೋಕ್ಷ ಸುಳಿವು ಕೊಟ್ಟಿದ್ದಾರೆ. ಸೋಮಶೇಖರ್ ಅವರನ್ನು ನಾನು ಸಂಪರ್ಕ ಮಾಡಿಲ್ಲ. ಆದರೆ ಅವರು ಕಾಂಗ್ರೆಸ್ಗೆ ದುಡಿದವರು. ನಾನು ಕಾಂಗ್ರೆಸ್ ಅಧ್ಯಕ್ಷ ಆಗಿದ್ದಾಗ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡಿದ್ದೆ. ಆಗ ಒಳ್ಳೆಯ ಕೆಲಸ ಮಾಡಿದ್ದರು. ಅವರು