ಭಾರತದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಯೋಚನೆಯಿಂದ ಹಾಗೂ ತೆಗೆದುಕೊಂಡ ದೃಢ ನಿರ್ಧಾರದಿಂದ ಭಾರತದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡುವುದಕ್ಕೆ ಕಡಿವಾಣ ಬಿದ್ದಿದೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ. ಕೋವಿಡ್-19 ಸೋಂಕಿನ ತಡೆ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾಸ್ಥ್ಯದ ದೃಷ್ಟಿಯಿಂದ 20 ಲಕ್ಷ ಕೋಟಿ ರೂಪಾಯಿಯ ಬೃಹತ್ ಮೊತ್ತದ ಪ್ಯಾಕೇಜ್ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು