ಮಹಾನಗರಪಾಲಿಕೆಯ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಸದ ಶ್ರಿರಾಮುಲು ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿ ಪಕ್ಷದ ಗುರಿ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಗುಡುಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಸಂಸದರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷ ವಿರೋಧಿ ಕೃತ್ಯ ಮೆರೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ. ವೆಂಕಟರಮಣ ಪರವಾಗಿ ಸಂಸದ