ಪಕ್ಷದ ಕಾರ್ಯಕರ್ತನ ಹತ್ಯೆ ಕುರಿತಂತೆ ಮಂಗಳೂರು ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸುಟ್ಟುಹಾಕುತ್ತೇವೆ ಎಂದು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಮುಂಬರುವ 10 ದಿನಗಳಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ, ಜನತೆಗೆ ರಕ್ಷಣೆ ಕೊಡದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಸುಟ್ಟು ಹಾಕುತ್ತೇವೆ ಎಂದು ಗುಡುಗಿದ್ದಾರೆ. ನಳೀನ್ ಕುಮಾರ್ ಕಟೀಲ್ ಭಾಷಣಕ್ಕೆ ನೆರೆದಿದ್ದ ಪಕ್ಷದ ಕಾರ್ಯಕರ್ತರು ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟಿ