ಆಪರೇಷನ್ ಕಮಲಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ಸುದ್ದಿಗಳ ನಡುವೆಯೇ ಬಿಜೆಪಿ ರಾಷ್ಟ್ರೀಯ ನಾಯಕ ರಾಜಧಾನಿಗೆ ಆಗಮಿಸಿರುವುದು ಕುತೂಹಲ ಮೂಡಿಸಿದೆ.ಬೆಂಗಳೂರಿಗೆ ಬಿ.ಜೆ.ಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಆಗಮಿಸಿದ್ದಾರೆ.ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ರಾಜ್ಯ ನಾಯಕರು ಬರಮಾಡಿಕೊಂಡರು. ಮಾಧ್ಯಮ ದವರ ಜೊತೆ ಮಾತನಾಡಲು ನಿರಾಕರಿಸಿದ ರಾಮಲಾಲ್, ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದರು.ರಾಜ್ಯ ಬಿ.ಜೆ.ಪಿ ನಾಯಕರ ಜೊತೆ ಮಹತ್ವದ ಸಭೆ ಏರ್ಪಡಿಸಲಾಗಿದೆ. ರಾಮ್ ಲಾಲ್ ಗೆ