ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಅವರು 150 ಸೀಟು ಎನ್ನುವ ಚೀಟಿ ಇಟ್ಟುಕೊಂಡು ಓಡಾಡುತ್ತಿರಲಿ ಎಂದು ವ್ಯಂಗ್ಯವಾಡಿದರು. ತಮ್ಮ ಕ್ಷೇತ್ರದಲ್ಲಿ ನಂಬಿಕೆಯಿಲ್ಲದವರು ಬೇರೆ ಕ್ಷೇತ್ರ ಹುಡುಕಿಕೊಂಡು ಹೋಗುತ್ತಾರೆ. ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸದಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.