ದೆಹಲಿಯಲ್ಲಿ ಆರಂಭವಾಗಿರುವ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಅಲ್ಲಿಯೇ ಆಪರೇಷನ್ ಕಮಲಕ್ಕೂ ಚಾಲನೆ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಅತೃಪ್ತಿ, ಅಸಮಾಧಾನದ ಲಾಭ ಪಡೆಯಲು ಬಿಜೆಪಿ ತನ್ನದೇ ಆದ ರಾಜಕೀಯ ದಾಳ ಉರುಳಿಸಿದ್ದು, ತೆರೆಮರೆಯಲ್ಲಿ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದೆ.ರಾಜ್ಯದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಮೂಡಿರುವ