ಬಿಜೆಪಿ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಚುನಾವಣೆ ಹೊಂದಾಣಿಕೆ ಮಾಡಿಕೊಂಡರೆ ಸಮಾಜದ ಗತಿಯೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಿಡಿಯುವ ಸಲುವಾಗಿ ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಇದು ಬಿಜೆಪಿಗೆ ಹೊಸದೇನಲ್ಲ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಇದೇ ರೀತಿ ಮಾಡಿ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕರ್ನಾಟಕದಲ್ಲೂ ಇದೇ ತಂತ್ರವನ್ನು ಅನುಸರಿಸುತ್ತಿವೆ. ಮಹಾರಾಷ್ಟ್ರದಲ್ಲೂ ಇದೇ ರೀತಿ ಹೊಂದಾಣಿಕೆ ಮಾಡಿಕೊಂಡಿತ್ತು ಎಂದಿದ್ದಾರೆ.