ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ಎಂದು ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಬೇಲೂರಿನ ಮಂಜುನಾಥ ಕಲ್ಯಾಣ ಮಂಟಪದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ಪಾಲ್ಗೊಂಡಿದ್ದರು. ತಾಲ್ಲೂಕು ಬಿಜೆಪಿ ನಾಯಕರ ವೈಫಲ್ಯದಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಎಂದು ಕಾರ್ಯಕರ್ತರು ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಲಿನ ಪರಾಮರ್ಶೆ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳದಂತೆ ನಾಯಕರು ಅಡ್ಡಿಪಡಿಸಿದ