ಮೈಸೂರು: ಸಿಎಂ ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ಅವರಿಗೇ ಸೋಲುಣಿಸಲು ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆಯಾ? ಹಾಗೊಂದು ಗುಸು ಗುಸು ಬಿಜೆಪಿ ವಲಯದಿಂದ ಕೇಳಿಬರುತ್ತಿದೆ.ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಸಂಖ್ಯೆ ಹೆಚ್ಚು. ಹೀಗಾಗಿ ಈ ಸಮುದಾಯಕ್ಕೆ ಸೇರಿದ ಪ್ರಮುಖರನ್ನೇ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಎಸ್ ವೈ ಪುತ್ರ ವಿಜಯೇಂದ್ರರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಬಂದಿತ್ತು.ಆದರೆ ಇನ್ನೊಂದು ಮೂಲಗಳ ಪ್ರಕಾರ ಲಂಡನ್ ನಲ್ಲಿ ಬಸವಣ್ಣನ ಮೂರ್ತಿ ಸ್ಥಾಪಿಸಿದ ಕೀರ್ತಿಯ