ಬೆಂಗಳೂರು : ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ, ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ರೋಡ್ ಶೋ ಮತ್ತು ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ.ಜೂನ್ 20ರಂದು ಬೆಂಗಳೂರಿನ ಕೊಮ್ಮಘಟ್ಟ ಮತ್ತು ಜೂನ್ 21ರಂದು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಎರಡು ಬೃಹತ್ ಸಮಾವೇಶ ಹಮ್ಮಿಕೊಳ್ಳಲು