ಬೆಂಗಳೂರು : ಬಿಜೆಪಿ ನಾಯಕರು ಸ್ಲಂ ವಾಸ್ತವ್ಯವನ್ನು ಹೂಡಿರುವ ಹಿನ್ನಲೆಯಲ್ಲಿ ಬಿಜೆಪಿಯವರ ಸ್ಲಂ ವಾಸ್ತವ್ಯ ದೊಡ್ಡ ನಾಟಕ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿಲ್ಲ. ಈಗ ಸ್ಲಂಗಳಿಗೆ ಹೋಗಿ ನಾಟಕ ಮಾಡ್ತಿದ್ದಾರೆ. ಬಿಜೆಪಿಯವರ ಸ್ಲಂ ರಾಜಕೀಯ ಚುನಾವಣಾ ಗಿಮಿಕ್ ಎಂದು ಆರೋಪಿಸಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ