ಸರ್ಕಾರದಿಂದ ಜನರಿಗೆ ಸಿಗಬೇಕಾದ ಸವಲತ್ತುಗಳಲ್ಲಿ ಬಿಜೆಪಿ ಪಕ್ಷದ ಸದಸ್ಯರು ರಾಜಕೀಯ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡಲ್ಪಡುವ ಲಸಿಕೆ ಹಂಚಿಕೆ, ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಿಂದ ನೀಡಲಾಗುವ ಆಹಾರ ಪೊಟ್ಟಣಗಳನ್ನು ವಿತರಿಸುವ ಕಾರ್ಯವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವನ್ನಾಗಿ