ಹಾವೇರಿ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಮಂಗಳವಾರ (ಇಂದು) ಪ್ರವಾಸ ಕೈಗೊಂಡಿದ್ದು ಮಧ್ಯಾಹ್ನ 3.30ಕ್ಕೆ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇರುವುದಾಗಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಾಗೇ ಸಂಜೆ 5.30ಕ್ಕೆ ಅಮಿತ್ ಶಾ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂತರೊಂದಿಗೆ