ಬೆಂಗಳೂರು : ಎಲೆಕ್ಷನ್ ಸಮೀಪಿಸುತ್ತಿರುವಂತೆಯೇ ಬಿಜೆಪಿಯ ಹೈಕಮಾಂಡ್ ನಾಯಕರು ಮೇಲಿಂದ ಮೇಲೆ ದಂಡಯಾತ್ರೆ ಆರಂಭಿಸಿದ್ದಾರೆ.ಮೋದಿ, ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಪಿ ನಡ್ಡಾ ವಿಶೇಷವಾಗಿ ಪ್ರಮುಖವಾಗಿ ನಾಲ್ಕು ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡು ಮಠಯಾತ್ರೆ ನಡೆಸುತ್ತಿದ್ದಾರೆ.ಪ್ರವಾಸದ ಮೊದಲ ದಿನವಾದ ಗುರುವಾರ ತುಮಕೂರಿನ ಸಿದ್ದಗಂಗಾ ಮಠ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸಿರಿಗೆರೆಯ