ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ತಡೆಹಿಡಿದಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಶಿವಮೂರ್ತಿ ವೃತ್ತದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ