ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಲಹೆಯಂತೆ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಗಸ್ಟ್ 22 ರಂದು ಯುವಮೋರ್ಚಾದಿಂದ ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಎರಡನೇ ಬಾರಿಗೆ ವಿಸ್ತಾರಕ್ ಯೋಜನೆ ಮುಂದುವರಿಸಲು ಕೂಡಾ ತೀರ್ಮಾನಿಸಲಾಗಿದೆ ಎಂದು ಸಭೆಯ ನಂತರ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ