ಬೆಂಗಳೂರು: ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ದೀಪಕ್ ಕೊಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಈಗ ಕೊಲೆಗಡುಕರಿಗೆ ಸ್ವರ್ಗವಾಗಿದೆ. ಹೆಣ ಬೀಳಿಸುವುದೇ ಸರ್ಕಾರದ ಉದ್ದೇಶವಾಗಿದೆ. ಪಿಎಫ್ಐ, ಕೆಎಫ್ ಡಿ ಸಂಘಟನೆಗಳೊಂದಿಗೆ ಸರ್ಕಾರ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ದೀಪಕ್