ರಾಜ್ಯ ಸರ್ಕಾರ ಅಧಿಕಾರದ ಬಲದಿಂದ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರಾದ ಆರ್.ಅಶೋಕ್. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಸಾಕ್ಷ್ಯ ಹೇಳುವಂತೆ ಒತ್ತಡ