ಬೆಂಗಳೂರು: ಮುಂದಿನ ಚುನಾವಣೆಗೆ ತಾಲೀಮು ಶುರು ಮಾಡಿರುವ ರಾಜ್ಯ ಬಿಜೆಪಿ ಘಟಕ ಅರಮನೆ ಮೈದಾನದಲ್ಲಿ ಇಂದು ಹಿಂದುಳಿದ ವರ್ಗದ ಸಮಾವೇಶಕ್ಕೆ ಸಕಲ ರೀತಿಯಲ್ಲಿ ಸಜ್ಜಾಗಿದೆ.ಸಮಾವೇಶಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸಲಿದ್ದು, ರಾಜ್ಯ ನಾಯಕರ ಉತ್ಸಾಹ ಹೆಚ್ಚಿಸಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಇಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.ಈ ಸಮಾವೇಶ ಮುಂಬರುವ ಚುನಾವಣೆಗೆ ಬಿಜೆಪಿಯ ಪೂರ್ವ ತಯಾರಿ ಎಂದೇ ಪರಿಗಣಿಸಲಾಗಿದ್ದು, ಹಿಂದುಳಿದ ವರ್ಗದವರನ್ನು ಸೆಳೆಯಲು