ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡುತ್ತಿರುವಾಗ ಮೈಕ್ ಕಿತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮುಂದುವರಿದಿದೆ. ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ, ಯಾತ್ರೆಯಲ್ಲಿ ಸಾವಿರಾರು ಜನ ಸೇರಲು ಮಾಜಿ ಶಾಸಕ ರವಿಕಾಂತ್ ಪಾಟೀಲ್ ಕಾರಣ ಎಂದು ಹೇಳುತ್ತಿದ್ದಂತೆ ಯಾತ್ರಾ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು. ಮಾಜಿ ಶಾಸಕ ರವಿಕಾಂತ್ ವಿರೋಧಿ ಬಣ ಯಡಿಯೂರಪ್ಪನವರಿಗೆ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿತು.