ಸಂಸದೀಯ ಮಂಡಳಿ ಸಭೆಗೆ ದಿನಾಂಕ ನಿಗದಿಯಾಗುವುದರೊಂದಿಗೆ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಒಂದು ಹಂತಕ್ಕೆ ಬಂದು ತಲುಪಿದೆ. ಮೂರರಿಂದ ನಾಲ್ವರು ಸಚಿವರೂ ಸೇರಿದಂತೆ 32 ಮಂದಿ ಶಾಸಕರು ಈ ಬಾರಿ ಟಿಕೆಟ್ ಕಳೆದುಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ. ಇದರೊಂದಿಗೆ ರಾಜ್ಯದಲ್ಲೂ ಗುಜರಾತ್ ಮಾದರಿಯೊಂದಿಗೆ ಬಿಜೆಪಿ ಚುನಾವಣಾ ಆಖಾಡಕ್ಕೆ ಇಳಿಯಲು ಮುಂದಾಗಿದೆ. ಎಲ್ಲ ಕ್ಷೇತ್ರಗಳಿಗೂ ತಲಾ ಮೂವರು ಸಂಭಾವ್ಯರ ಹೆಸರು ಕೊಡಿ ಎಂದು ವರಿಷ್ಠರು ಸೂಚನೆ ನೀಡಿದಾಗಲೇ ಹಲವು ಶಾಸಕರು ತಮಗೆ