ಹಾಸನ : ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿ ದೇವೇಗೌಡರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದ್ದು, ಗ್ರಾಮೀಣ, ನಗರ ಪ್ರದೇಶದ ಜನರಿಗೆ ಒಳ್ಳೆಯ ಶಿಕ್ಷಣ ನೀಡಬೇಕು ಅಂತ ಹೋರಾಟ ಮಾಡಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಏಳೂ ಕಡೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮನವಿ ಮಾಡಿದ್ದಾರೆ.ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ಶಿಕ್ಷಣವನ್ನು ವ್ಯಾಪಾರಿ ಸಂಸ್ಥೆ ಮಾಡಿಕೊಂಡಿದ್ದಾರೆ ಎಂದು ದೂರಿದರು. ಕೆಲವರು