ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿದ ಕಾಂಗ್ರೆಸ್ ಗೆ ಟ್ವೀಟರ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು| pavithra| Last Modified ಬುಧವಾರ, 20 ಜನವರಿ 2021 (10:50 IST)
ಬೆಂಗಳೂರು : 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಿಂದ ರಾಜಭವನ ಚಲೋ  ಹಿನ್ನಲೆಯಲ್ಲಿ ಟ್ವೀಟರ್ ನಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯ ಮಾಡಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್, ಮೋದಿ ಸರ್ಕಾರ ತಂದ ರೈತ ಪರ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನವರು ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೀವು ರೈತಪರ ಆಡಳಿತ ನಡೆಸಿದ್ರೆ ರೈತರ ಆತ್ಮಹತ್ಯೆ ಹೆಚ್ತಿರಲಿಲ್ಲ. ನಿಮ್ಮ ಅವಧಿಯಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿರಲಿಲ್ಲ. ಅಲ್ಲವೇ? 3,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಶರಣಾಗುತ್ತಿದ್ದ ವೇಳೆ  ಕಣ್ಣೊರೆಸುವ ಬದಲು ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದೀರಿ. ಈಗ ರಾಜಭವನ ಚಲೋ ಎಂಬ ನಾಟಕ ಚೆನ್ನಾಗಿದೆ! ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :