ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವ ರೋಗ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗಲ್ವಾ?