ಪ್ರಧಾನಿ ಮೋದಿ ಕಾರ್ಯವೈಖರಿ, ದುರಾಡಳಿತದ ವಿರುದ್ಧ ಬಿಜೆಪಿ ನಾಯಕರೇ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ನಾಯಕರಾದ ಯಶ್ವಂತ್ ಸಿನ್ಹಾ, ಎಸ್.ಎಂ.ಕೃಷ್ಣ ಸೇರಿದಂತೆ ಹಲವಾರು ಬಿಜೆಪಿ ನಾಯಕರೇ ವಾಗ್ದಾಳಿ ನಡೆಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಬಿಜೆಪಿಗೆ ಸೇರ್ಪಡೆಯಾದ ನಂತರ ಅಲ್ಲಿನ