ಬಸವರಾಜ ಬೊಮ್ಮಾಯಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದು ಜು.28ಕ್ಕೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ವರ್ಷದ ಸಾಧನೆ ಕಾರ್ಯಕ್ರಮ ಆಯೋಜಿಸುವ ಮೂಲಕ ಆ.3ರ ಸಿದ್ದರಾಮೋತ್ಸವದ ಅಬ್ಬರವನ್ನು ಕಟ್ಟಿಹಾಕಲು ಬಿಜೆಪಿ ಮುಂದಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ, ಯೋಜನೆಗಳ ಬಗ್ಗೆ ಮನೆ ಮನೆಗೆ ಪ್ರಚಾರ ಅಭಿಯಾನ, ಪಕ್ಷದ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ಪಕ್ಷದ ವತಿಯಿಂದ