ಮುಂಬರುವ ಉಪಚುನಾವಣೆಗಾಗಿ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಚುರುಕುಗೊಳಿಸಿದೆ. ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತಿದೆ. ಹೀಗಂತ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ರು.ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಈಗಾಗಲೇ ಬೆಂಗಳೂರಿನಲ್ಲಿ ಅ. 23 ರಂದು ಉತ್ತರ ಕರ್ನಾಟಕದ ಎಂಟು ವಿಧಾನಸಭಾ ಕ್ಷೇತ್ರಗಳ ಸಭೆಯನ್ನು ನಡೆಸಲಾಗಿದೆ. ಅದೇ ರೀತಿ ಅಥಣಿ, ಕಾಗವಾಡ, ಗೋಕಾಕ್ , ಹಿರೇಕೆರೂರ, ರಾಣೆಬೆನ್ನೂರ, ಯಲ್ಲಾಪುರ, ವಿಜಯನಗರ (ಹೊಸಪೇಟೆ) ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ