ಬೆಂಗಳೂರು : ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ಜೆಡಿಎಸ್ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು, ಚಿದಂಬರಂ ವಿಷಯದಲ್ಲಿ ಕೇಂದ್ರ ಸರ್ಕಾರ ಸಿಬಿಐ ದುರಪಯೋಗ ಮಾಡಿಕೊಂಡಿದೆ. ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ