RSS ಸಂಸ್ಥಾಪಕರಲ್ಲಿ ಒಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಗೌರವಾನ್ವಿತ ಹೆಡಗೇವಾರ್ ರಂತಹ ಅಪ್ರತಿಮ ದೇಶ ಭಕ್ತರ ಹೆಸರು ಹೇಳುವ ಯೋಗ್ಯತೆಯನ್ನು ಹರಿಪ್ರಸಾದ್ ಮೊದಲು ಸಂಪಾದಿಸಲಿ, ಉಳಿದದ್ದೆಲ್ಲ ಮತ್ತೆ ಎಂದು ಟೀಕಿಸಿದೆ.