ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮೇಲೆ ಎಸಿಬಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡುವ ಮೂಲಕ ಸರ್ಕಾರಕ್ಕೆ ತಪರಾಕಿ ಹಾಕಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಗೋ. ಮಧುಸೂದನ್ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಒಂದೇ ಪ್ರಕರಣಕ್ಕೆ ಎರಡು ಎಫ್ಐಆರ್ ಗಳನ್ನ ಎಸಿಬಿ ಹಾಕಿರುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಬಿಎಸ್ ವೈ ಮೇಲೆ ಇನ್ನೂ 25-30 ಎಫ್ಐಆರ್ ಹಾಕುವುದು ಎಸಿಬಿ ಉದ್ದೇಶವಾಗಿತ್ತು.