2018 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ವಿತರಣೆಗಾಗಿ ಬಾಹ್ಯ ಸಂಸ್ಥೆಯಿಂದ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಪ್ರತಿಸ್ಪರ್ಧಿ ಪಕ್ಷಗಳ ಹಲವಾರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ಬಯಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ನಾಯಕರು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ವರ್ಷದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಅತ್ಯುತ್ತಮವಾದ ಅಭ್ಯರ್ಥಿ ಯಾರು ಎಂದು