ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಇದೇ 28ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚೆಗಾಗಿ ನಡೆಸಿದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರು ನಗರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ