ಆದಾಯ ತೆರಿಗೆ ದಾಳಿಗೆ ಗುರಿಯಾಗಿದ್ದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುವಲ್ಲಿ ರಾಜ್ಯ ಬಿಜೆಪಿ ನಾಯಕರು ವಿಫಲವಾಗಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯ ಸರಕಾರ ಭ್ರಷ್ಟರಿಗೆ ರಕ್ಷಣೆ ನೀಡುತ್ತಿದೆ ಎನ್ನುವ ಭಾವನೆಯನ್ನು