ಬಿ.ಎಸ್.ಯಡಿಯೂರಪ್ಪ ಡೈರಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸಿ.ಟಿ.ರವಿ ಹತ್ತು ಪ್ರಶ್ನೆಗಳನ್ನು ಕೇಳಿದ್ದು, ಅವು ಈಗ ವೈರಲ್ ಆಗಿವೆ. ಡೈರಿ ನಿಮಗೆ ಸಿಕ್ಕಿದ್ದು ಯಾವಾಗ..? ಯಾರು ಈ ಡೈರಿಯನ್ನು ತಂದುಕೊಟ್ಟರು? ಡೈರಿಯನ್ನು ಎಲ್ಲಿ ಕೊಟ್ಟರು..? ಒರಿಜಿನಲ್ ಡೈರಿ ಎಲ್ಲಿ? ಯಾಕೆ ಇದುವರೆಗೂ ಈ ಡೈರಿ ಆಧರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ? 2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ