ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಡಿಸೆಂಬರ್ 30ರಂದು ನಗರಕ್ಕೆ ಆಗಮಿಸಲಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ. ಪರಿವರ್ತನಾ ಯಾತ್ರೆ ನಾಳೆ ಮಧ್ಯಾಹ್ನ 2.30ಕ್ಕೆ ನಗರ ಪ್ರವೇಶಿಸಲಿದ್ದು, ಬೋಳ ರಾಮೇಶ್ವರ ದೇವಸ್ಥಾನದಿಂದ ಡಿಎಸಿಜಿ ಪಾಲಿಟೆಕ್ನಿಕ್ ಆವರಣದಲ್ಲಿ ವೇದಿಕೆಯವರೆಗೆ ಬೈಕ್ ಜಾಥಾ ನಡೆಸಲಾಗುವುದು ಎಂದಿದ್ದಾರೆ. ಯಡಿಯೂರಪ್ಪ ಪ್ರಮುಖ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ಕುಮಾರ್, ಅನಂತ್ಕುಮಾರ್ ಹೆಗಡೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.