ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.ಕೋಮು ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ರಾಜಕೀಯ ಬಣ್ಣ