ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗುತ್ತದೆ. ನೀರಾವರಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ