ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ರಾಜ್ಯದ ಜನ ತೀರ್ಮಾನಿಸಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೇ ಪದೆ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು,ಮೋದಿ ಅವರು ಈ ದೇಶದ ಪ್ರಧಾನಮಂತ್ರಿಗಳು. ಅವರು ಎಷ್ಟು ಬಾರಿಯಾದರೂ ರಾಜ್ಯಕ್ಕೆ ಭೇಟಿ ನೀಡಬಹುದು. ಆದರೆ