ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಕಿತ್ತಿ ಬಿಸಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಅಭಿವೃದ್ಧಿ ಮಾತ್ರ ಆಗಿದೆ ಎಂದು ಆರೋಪಿಸಿದ್ದಾರೆ. ರೈಲಿನ ಎಂಜಿನ್ ತೆಗೆದರೆ ರೈಲು ಮುಂದಕ್ಕೆ ಚಲಿಸಲಿದೆಯೇ, ಅದರಂತೆ ಕಾಂಗ್ರೆಸ್ ಅಭಿವೃದ್ಧಿಯನ್ನು ಬಿಟ್ಟು ಹೊರಟಿದೆ. ಸರ್ಕಾರದ ವಿರುದ್ಧ ಯುವಕರು ಹಾಗೂ ರೈತರು ಆಕ್ರೋಶಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇಲ್ಲಿನ ಜನರ