ಧಾರವಾಡ: ಸದ್ಯ ನಾಲ್ಕು ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ ಕಟೀಲ್ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈಗಾಗಲೇ ಬೆಳಗಾವಿಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡದಲ್ಲಿ ಸೋಲಿಲ್ಲದ ಸರದಾರ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷ ಬಿಜೆಪಿ ನಾಲ್ಕೂ ಸ್ಥಾನಗಳನ್ನು ಗೆಲ್ಲಲಿದೆ. ಹೀಗಾಗಿ ಮುಂದಿನ ತಂತ್ರಗಳ ಬಗ್ಗೆ ಚರ್ಚೆ