ಬೆಂಗಳೂರು: ರಾಜ್ಯದ ಬೆಳಗಾವಿ, ಕಲಬುರ್ಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಪಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಸರಕಾರವು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯ ಸರಕಾರವು ಶ್ರೀ ಯಡಿಯೂರಪ್ಪ ಮತ್ತು ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ