ಕಾಂಗ್ರೆಸ್ನ 10 ಸಚಿವರು, ಮೂರು ಡಜನ್ ಶಾಸಕರು, ಸಂಸದರು ಬೀಡು ಬಿಟ್ಟಿದ್ದರೂ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಂತಾ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಶ್ರೀರಾಮಲು ಅವರನ್ನು ಎದುರಿಸಲು ಎಷ್ಟೊಂದು ಪ್ರಯತ್ನ ಮಾಡುತ್ತಿದ್ದಾರೆ. ಬಳ್ಳಾರಿ ಅಭಿವೃದ್ಧಿಗೆ ಶ್ರೀರಾಮಲು ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಶ್ರೀರಾಮಲು ಕನ್ನಡ ಮಾತನಾಡುವ ಬಗ್ಗೆ ಮಾತನಾಡಿದ್ದಾರೆ. ಬೇರೆಯವರನ್ನ ಅವಹೇಳನ ಮಾಡುವುದರಲ್ಲಿ ಸಿದ್ದರಾಮಯ್ಯ ತೊಡಗಿದ್ದಾರೆ.